Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ವಿುಕ್ಕಿರುವ ನೈವೇದ್ಯದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:12
14 ತಿಳಿವುಗಳ ಹೋಲಿಕೆ  

ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.


ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.


ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.


ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.


ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.


ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.


ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು