Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೆಲ್ಲಾ ಯಾಜಕರಿಗಾಗಿ ಪ್ರತ್ಯೇಕಿಸಿ ಆರತಿಯೆತ್ತಿ ಸಮರ್ಪಿಸುವ ಆ ಎದೆಯ ಭಾಗವನ್ನು, ತೊಡೆಯನ್ನು ಸರ್ವೇಶ್ವರನ ಸನ್ನಿಧಿಗೆ ತರಬೇಕು. ಸರ್ವೇಶ್ವರನ ಆಜ್ಞಾನುಸಾರ ಅವು ನಿಮಗೂ ನಿಮ್ಮ ವಂಶಜರಿಗೂ ಸಲ್ಲತಕ್ಕದ್ದು. ಇದು ಶಾಶ್ವತ ನಿಯಮ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನೂ ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನೂ ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಪ್ರಾಣಿಗಳ ಕೊಬ್ಬನ್ನು ಅಗ್ನಿಯ ಮೂಲಕ ಹೋಮಮಾಡುವಾಗ, ಯಾಜಕರಿಗಾಗಿ ತೆಗೆದಿಟ್ಟ ತೊಡೆಯ ಭಾಗವನ್ನು ಮತ್ತು ನೈವೇದ್ಯವಾಗಿ ನಿವಾಳಿಸಬೇಕಾದ ಎದೆಯ ಭಾಗವನ್ನು ಯೆಹೋವನ ಸನ್ನಿಧಿಗೆ ತರಬೇಕು. ಅದು ನಿಮ್ಮ ಪಾಲಾಗಿರುವುದು. ಅದು ನಿನಗೂ ನಿನ್ನ ಮಕ್ಕಳಿಗೂ ಸೇರಿದ್ದು. ಯೆಹೋವನು ಆಜ್ಞಾಪಿಸಿದಂತೆ ಯಜ್ಞಗಳ ಆ ಭಾಗವು ಎಂದೆಂದೂ ನಿಮ್ಮ ಪಾಲಾಗಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:15
12 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.


ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.


ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.


ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.


ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.


ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು