ಯಾಜಕಕಾಂಡ 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ; ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೋಶೆ, “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ? ಅಧ್ಯಾಯವನ್ನು ನೋಡಿ |