ಯಾಜಕಕಾಂಡ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ಆರೋನನು ಮೋಶೆಗೆ, “ಇವರು ಈ ದಿನ ಸರ್ವೇಶ್ವರನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಬಲಿಯನ್ನು ಹಾಗು ದಹನ ಬಲಿಯನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಲ್ಲಿ ನಾನು ದೋಷಪರಿಹಾರಕ ಬಲಿಮಾಂಸವನ್ನು ಈ ದಿನ ಊಟಮಾಡಿದ್ದರೆ ಅದು ಸರ್ವೇಶ್ವರನಿಗೆ ಸರಿದೋರುತ್ತಿತ್ತೆ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಕ್ಕೆ ಆರೋನನು ಮೋಶೆಗೆ - ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನಿಗೆ ಒಳ್ಳೇದಾಗಿ ತೋಚುತ್ತಿತ್ತೋ ಎಂದು ಉತ್ತರಕೊಡಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಆರೋನನು ಮೋಶೆಗೆ, “ನೋಡು ಈ ದಿನ ಇವರು ಯೆಹೋವನ ಸನ್ನಿಧಿಗೆ ಪಾಪಪರಿಹಾರಕ ಮತ್ತು ಸರ್ವಾಂಗಹೋಮಗಳನ್ನು ತಂದಿದ್ದರೂ ನನಗೆ ಈ ಆಪತ್ತು ಸಂಭವಿಸಿತು. ಹೀಗಿರುವಾಗ ನಾನು ಪಾಪಪರಿಹಾರಕ ಸಮರ್ಪಣೆಯ ಪಶುವಿನ ಮಾಂಸವನ್ನು ಈ ದಿನದಲ್ಲಿ ತಿಂದಿದ್ದರೆ ಯೆಹೋವನಿಗೆ ಒಳ್ಳೆಯದಾಗಿ ತೋರುತ್ತಿತ್ತೋ? ಇಲ್ಲ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಆರೋನನು ಮೋಶೆಗೆ, “ಈ ದಿನ ಅವರು ಪಾಪಪರಿಹಾರ ಬಲಿಯನ್ನು ಮತ್ತು ಅದರ ದಹನಬಲಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದ್ದರು. ಆದರೆ ಈ ದುಃಖ ಘಟನೆಗಳು ನನಗೆ ಸಂಭವಿಸಿದೆ. ಹೀಗಿರುವಲ್ಲಿ ಇಂದು ನಾನು ಆ ಪಾಪ ಪರಿಹಾರದ ಬಲಿದ್ರವ್ಯವನ್ನು ಊಟಮಾಡಿದ್ದರೆ, ಯೆಹೋವ ದೇವರು ಸಂತೋಷಪಡುತ್ತಿದ್ದರೋ?” ಎಂದನು. ಅಧ್ಯಾಯವನ್ನು ನೋಡಿ |