Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫನನ್ನು ಕರೆಸಿ, “ನೀವು ಇಲ್ಲಿಗೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆ ಆರೋನರ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಸಾಫಾನನನ್ನೂ ಕರಿಸಿ - ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರ ಹೆಸರು ಮೀಶಾಯೇಲ್ ಮತ್ತು ಎಲ್ಸಾಫಾನ್. ಮೋಶೆ ಆ ಪುತ್ರರಿಗೆ, “ಪವಿತ್ರಸ್ಥಳದ ಮುಂದೆ ಬಿದ್ದಿರುವ ನಿಮ್ಮ ಸಹೋದರರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜೀಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಜಾಫಾನನನ್ನೂ ಕರೆದು, “ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತುಕೊಂಡು ಹೋಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:4
10 ತಿಳಿವುಗಳ ಹೋಲಿಕೆ  

ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.


ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.


ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.


ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.


ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.


ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.


ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು