ಯಾಜಕಕಾಂಡ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀನೂ ನಿನ್ನ ಪುತ್ರರು ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು, ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ. ಅಧ್ಯಾಯವನ್ನು ನೋಡಿ |