Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:11
8 ತಿಳಿವುಗಳ ಹೋಲಿಕೆ  

ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.


ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.


ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.


“‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,


ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.


ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.


“ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,


ನೀವು ತಿನ್ನಬಹುದಾದ ಪಶುಜಾತಿಗಳು ಯಾವುವೆಂದರೆ ದನ, ಕುರಿ, ಆಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು