Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿವಿುಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಕ್ರಿಮಿಕೀಟಗಳು ರೆಕ್ಕೆಗಳುಳ್ಳದ್ದಾಗಿ ನಾಲ್ಕು ಕಾಲುಗಳಲ್ಲಿ ಹರಿದಾಡುವುದಾಗಿದ್ದರೆ ಅವು ನಿಮಗೆ ನಿಷಿದ್ಧವಾಗಿವೆ. ಆ ಕ್ರಿಮಿಕೀಟಗಳನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:20
14 ತಿಳಿವುಗಳ ಹೋಲಿಕೆ  

ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.


ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವೂ ನಿಮಗೆ ಅಶುದ್ಧ. ಅವುಗಳನ್ನು ನೀವು ತಿನ್ನಬಾರದು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.


ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.


ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.


ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.


ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು