Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಲ್ಲದೆ ಮುಂದೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:24
36 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.


ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,


ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.


ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.


ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.


ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.


ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.


“‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.


ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು