Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:39
18 ತಿಳಿವುಗಳ ಹೋಲಿಕೆ  

ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.


ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,


ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.


“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


“‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


“‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.


ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು