ಯಾಜಕಕಾಂಡ 11:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ. ಅಧ್ಯಾಯವನ್ನು ನೋಡಿ |