Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಂದಿಯ ಗೊರಸು ಸೀಳಿದೆ. ಆದರೂ ಅದು ಮೆಲುಕು ಹಾಕುವುದಿಲ್ಲ. ಆದ್ದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:7
11 ತಿಳಿವುಗಳ ಹೋಲಿಕೆ  

ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.


ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.


ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.


ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.


“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.


ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು