Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಒಬ್ಬ ಸ್ತ್ರೀ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: “ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:2
14 ತಿಳಿವುಗಳ ಹೋಲಿಕೆ  

ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.


“‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


“‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.


ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.


ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.


ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು