ಯಾಜಕಕಾಂಡ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕುರಿಯನ್ನು ಕೊಡುವದಕ್ಕೆ ಗತಿಯಿಲ್ಲದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನೂ ದೋಷಪರಿಹಾರಕ್ಕಾಗಿ ಒಂದನ್ನೂ ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ” ಅಧ್ಯಾಯವನ್ನು ನೋಡಿ |