Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾಜಕನು ನೋಡುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದದರಿಂದ ಅವನು ಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ಆ ವ್ಯಕ್ತಿಯ ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ಆ ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯಾಜಕನು ಅದನ್ನು ಗಮನಿಸಬೇಕು. ತೊನ್ನು ಹತ್ತಿದರೆ, ಅವನ ಮೈಯೆಲ್ಲವನ್ನು ಹರಡಿಕೊಂಡಿದ್ದರೆ, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವುದರಿಂದ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:13
6 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


“ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,


ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.


ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು