ಯಾಜಕಕಾಂಡ 13:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವಂಥಾದ್ದು ಆಗಿರುವುದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿ ಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ದದ್ದು ಆಗಿರುವದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯಾಜಕನು ಆ ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ. ಅಧ್ಯಾಯವನ್ನು ನೋಡಿ |