ಯಾಜಕಕಾಂಡ 13:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಇಸುಬನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಏಳನೆಯ ದಿನದಲ್ಲಿ ಯಾಜಕನು ತಿರಿಗಿ ಆ ದದ್ದನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು. ಅಧ್ಯಾಯವನ್ನು ನೋಡಿ |