Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಒಬ್ಬ ವ್ಯಕ್ತಿಯ ತಲೆಯ ಕೂದಲು ಉದುರಿಹೋದುದರಿಂದ ಬೋಳುತಲೆಯವನಾದರೂ ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯಾವನಾದರೂ ತಲೆಯ ಕೂದಲು ಉದುರಿಹೋದದರಿಂದ ಬೋಳತಲೆಯವನಾದರೂ ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಒಬ್ಬ ಮನುಷ್ಯನ ತಲೆಕೂದಲು ಉದುರಿಹೋಗುತ್ತಿದ್ದರೆ ಅವನು ಶುದ್ಧನಾಗಿದ್ದಾನೆ. ಅವನು ಬೋಳುತಲೆಯವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಒಬ್ಬ ಗಂಡಸಿನ ತಲೆಯ ಕೂದಲು ಉದುರಿ ಹೋದರೆ, ಅವನು ಬೋಳು ತಲೆಯವನು. ಆದರೂ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:40
10 ತಿಳಿವುಗಳ ಹೋಲಿಕೆ  

ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.


ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.


ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.


ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.


ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.


ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು