Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಆ ವಸ್ತುವು ಬಟ್ಟೆಯಾದರೂ ನೆಯಿಗೆಯಾದರೂ ಹೆಣಿಗೆಯಾದರೂ ಉಣ್ಣೆಯದಾದರೂ ನಾರಿನದಾದರೂ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಆ ವಸ್ತುವು ಬಟ್ಟೆಯಾದರೂ ಹಾಸಾದರೂ ಹೊಕ್ಕಾದರೂ ಉಣ್ಣೆಯದಾದರೂ ನಾರಿನದಾದರೂ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:52
10 ತಿಳಿವುಗಳ ಹೋಲಿಕೆ  

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.


ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.


ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.


“ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,


ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,


ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.


ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು