ಯಾಜಕಕಾಂಡ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಏಳು ದಿನಗಳಾದ ಮೇಲೆ ಯಾಜಕನು ಮತ್ತೆ, ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಕೇವಲ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏಳು ದಿನಗಳಾದ ಮೇಲೆ ಯಾಜಕನು ತಿರಿಗಿ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |