ಯಾಜಕಕಾಂಡ 14:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಲ್ಲದೆ, ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಬಲಿಯಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ದಹನಬಲಿಯಾಗಿ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವದಕ್ಕೆ [ಆ ಕುರಿಯನ್ನು] ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು [ಆ ಎರಡನೆಯ ಟಗರು ಮರಿಯನ್ನು] ಸರ್ವಾಂಗಹೋಮಕ್ಕಾಗಿ ವಧಿಸಬೇಕು. ಅವನು ಆ ಸರ್ವಾಂಗಹೋಮವನ್ನೂ ನೈವೇದ್ಯವನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಯಾಜಕನು ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು. ತರುವಾಯ ಅವನು ದಹನಬಲಿಯ ಪ್ರಾಣಿಯನ್ನು ವಧಿಸಬೇಕು. ಅಧ್ಯಾಯವನ್ನು ನೋಡಿ |