Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ಅಷ್ಟನ್ನು ಸಮರ್ಪಿಸುವದಕ್ಕೆ ಬಡವನಾಗಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರಮಾಡಿಸಿಕೊಳ್ಳುವದಕ್ಕೋಸ್ಕರ [ಯಾಜಕನ ಕೈಯಿಂದ] ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಮೂರು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:21
17 ತಿಳಿವುಗಳ ಹೋಲಿಕೆ  

“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.


“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.


“‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.


“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.


ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು