Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ಪರೀಕ್ಷಿಸಬೇಕು. ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು. ಚರ್ಮರೋಗದಿಂದ ರೋಗಿಯು ಗುಣವಾದನೆಂದು ಯಾಜಕನು ಪರೀಕ್ಷಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:3
14 ತಿಳಿವುಗಳ ಹೋಲಿಕೆ  

ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.


ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


“ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು