ಯಾಜಕಕಾಂಡ 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪಾರಿವಾಳದ ಮರಿಗಳಲ್ಲಿಯಾಗಲಿ ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಿಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅವನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯ ಶುದ್ಧೀಕರಣಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ಆ ವ್ಯಕ್ತಿ ಶುದ್ಧನಾಗುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದರಂತೆಯೇ ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಧಾನ್ಯಸಮರ್ಪಣೆಯೊಂದಿಗೆ ಸಮರ್ಪಿಸಬೇಕು, ಶುದ್ಧಪಡಿಸಿಕೊಳ್ಳುವವನಿಗೋಸ್ಕರ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.” ಅಧ್ಯಾಯವನ್ನು ನೋಡಿ |