Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವನು ಆ ಕಲ್ಲುಗಳನ್ನು ತೆಗಿಸಿ ಮನೆಯ ಗೋಡೆಗಳನ್ನು ಗೀಚಿಸಿ ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:43
9 ತಿಳಿವುಗಳ ಹೋಲಿಕೆ  

ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.


ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.


“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು