Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:8
19 ತಿಳಿವುಗಳ ಹೋಲಿಕೆ  

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.


ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.


ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


“‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.


ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು