Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾವನಾದರೂ ಆ ವಸ್ತುಗಳನ್ನು ಮುಟ್ಟಿದರೆ, ಆ ವ್ಯಕ್ತಿ ಅಶುದ್ಧನಾಗಿರುವನು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯಾರಾದರೂ ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧರಾಗಿರುವರು. ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:27
15 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


“‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.


ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.


ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.


“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು