Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:5
31 ತಿಳಿವುಗಳ ಹೋಲಿಕೆ  

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


“‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”


ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.


ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.


ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.


ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.


ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.


“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು