Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:8
11 ತಿಳಿವುಗಳ ಹೋಲಿಕೆ  

ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.


“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು