Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:15
15 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.


ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.


ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.


ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು