ಯಾಜಕಕಾಂಡ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದೊಳಗೆ ಹೋಗಕೂಡದು. ಹಾಗೆ ತನ್ನ ಹಾಗು ಮನೆತನದವರ ಪರವಾಗಿ ಮತ್ತು ಇಸ್ರಯೇಲರ ಇಡೀ ಸಮಾಜದ ಪರವಾಗಿ ಪ್ರಾಯಶ್ಚಿತ್ತ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ದೋಷಪರಿಹಾರಮಾಡುವದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಕೂಡದು. ಹಾಗೆ ತನಗೋಸ್ಕರವಾಗಿಯೂ ತನ್ನ ಮನೆತನದವರಿಗೋಸ್ಕರವಾಗಿಯೂ ಇಸ್ರಾಯೇಲ್ಯರ ಎಲ್ಲಾ ಜನಸಮೂಹಕ್ಕೋಸ್ಕರವಾಗಿಯೂ ದೋಷಪರಿಹಾರಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆರೋನನು ಮಹಾ ಪವಿತ್ರಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡಲು ದೇವದರ್ಶನಗುಡಾರದೊಳಗೆ ಹೋದ ಸಮಯದಿಂದ ಅವನು ಬರುವ ತನಕ ಗುಡಾರದೊಳಗೆ ಯಾರೂ ಇರಕೂಡದು. ಆರೋನನು ಬರುವ ತನಕ ಯಾರೂ ಒಳಗೆ ಹೋಗಕೂಡದು. ಹೀಗೆ ಆರೋನನು ತನಗಾಗಿಯೂ ತನ್ನ ಕುಟುಂಬಕ್ಕಾಗಿಯೂ ಇಡೀ ಇಸ್ರೇಲ್ ಸಮೂಹಕ್ಕಾಗಿಯೂ ಪ್ರಾಯಶ್ಚಿತ್ತ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಮಹಾಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ, ತನ್ನ ಮನೆಯವರಿಗೆಲ್ಲರಿಗೋಸ್ಕರವೂ, ಇಸ್ರಾಯೇಲರ ಸಭೆಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಿ ಹೊರಗೆ ಬರುವ ತನಕ ದೇವದರ್ಶನದ ಗುಡಾರದಲ್ಲಿ ಒಬ್ಬ ಮನುಷ್ಯನೂ ಇರಬಾರದು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.