Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಾಯೇಲ್ಯರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ ಅಪರಾಧಗಳನ್ನೂ ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:21
16 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.


ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ


ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.


ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.


ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.


“ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.


ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು