Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಜಾಜೇಲನಿಗೆ ಹೋತವನ್ನು ಬಿಟ್ಟು ಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಬಲಿಪಶುವಿಗಾಗಿ ಹೋತವನ್ನು ಹೋಗಲು ಬಿಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:26
19 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.


ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.


“ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.


ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.


“‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು