ಯಾಜಕಕಾಂಡ 16:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |