Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಈ ರೀತಿಯಾಗಿ ಬರಬೇಕು. ದೋಷಪರಿಹಾರಕ ಬಲಿಗಾಗಿ ಹೋರಿಯನ್ನೂ ದಹನಬಲಿಗಾಗಿ ಟಗರನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಾಗಿ ಬರಬೇಕು. ಅವನು ದೋಷಪರಿಹಾರಕಯಜ್ಞಕ್ಕಾಗಿ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಟಗರನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:3
13 ತಿಳಿವುಗಳ ಹೋಲಿಕೆ  

ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.


ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,


ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.


“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.


ಯೆಹೋವನು ಮೋಶೆಗೆ ಇಂತೆಂದನು,


ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.


ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು