ಯಾಜಕಕಾಂಡ 17:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲ್ಯರಿಗೆ - ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ಇದನ್ನು ಯಾಕೆ ಮಾಡಬೇಕೆಂದರೆ, ಮಾಂಸದಲ್ಲಿ ರಕ್ತವು ಇನ್ನೂ ಇದ್ದರೆ, ಅದರ ಪ್ರಾಣವು ಇನ್ನೂ ಮಾಂಸದಲ್ಲಿ ಇದೆ. ಆದ್ದರಿಂದ ನಾನು ಇಸ್ರೇಲರಿಗೆ ಈ ಅಪ್ಪಣೆಯನ್ನು ಕೊಡುತ್ತೇನೆ. ರಕ್ತದಿಂದ ಕೂಡಿರುವ ಮಾಂಸವನ್ನು ತಿನ್ನಬಾರದು. ಯಾವನಾದರೂ ರಕ್ತ ಭೋಜನ ಮಾಡಿದರೆ, ಅವನು ತನ್ನ ಜನರಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿ |