Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಹಾಗು ಸ್ನಾನಮಾಡಿಕೊಳ್ಳದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆಯೂ ಸ್ನಾನಮಾಡದೆಯೂ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳದೆಯೂ ಸ್ನಾನ ಮಾಡಿಕೊಳ್ಳದೆಯೂ ಹೋದರೆ ಆಗ ಅವನು ಪಾಪಮಾಡಿದ ದೋಷಿಯಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:16
11 ತಿಳಿವುಗಳ ಹೋಲಿಕೆ  

“‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು