ಯಾಜಕಕಾಂಡ 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |