ಯಾಜಕಕಾಂಡ 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾಕಂದರೆ ಯಜ್ಞಪಶುಗಳನ್ನು ಬೈಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲ್ಯರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತಂದು ಯೆಹೋವನ ಮುಂದೆ ಸಮಾಧಾನಯಜ್ಞರೂಪವಾಗಿ ಯೆಹೋವನಿಗೇ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಮಾಧಾನಯಜ್ಞರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |