ಯಾಜಕಕಾಂಡ 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಲಿನ ಮುಂದಿರುವ ಯಜ್ಞವೇದಿಗೆ ಎರಚಿ ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಳಿಕ ಯಾಜಕನು ಆ ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು. ಅಧ್ಯಾಯವನ್ನು ನೋಡಿ |