Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:7
23 ತಿಳಿವುಗಳ ಹೋಲಿಕೆ  

ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.


ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.


“ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು