Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಅತ್ತಿಗೆ ನಾದಿನಿಯರನ್ನು ಸಂಭೋಗಿಸಬಾರದು; ಅವರು ಅಣ್ಣತಮ್ಮಂದಿರ ಹೆಂಡತಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅತ್ತಿಗೆ ನಾದಿನಿಯರ ಸಂಗಮಾಡಬಾರದು; ಅವರು ಅಣ್ಣತಮ್ಮಂದಿರ ಹೆಂಡತಿಯರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:16
7 ತಿಳಿವುಗಳ ಹೋಲಿಕೆ  

ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.


ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.


ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.


ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’


ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,


ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು