Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಹೆಂಡತಿ ಜೀವದಿಂದಿರುವಾಗಲೆ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನುಂಟು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೆಂಡತಿ ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನೂ ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನುಂಟುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ನಿನ್ನ ಹೆಂಡತಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದುಕೊಳ್ಳಬೇಡ. ಒಬ್ಬಳು ಜೀವಂತವಾಗಿರುವಾಗ ಮತ್ತೊಬ್ಬಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:18
8 ತಿಳಿವುಗಳ ಹೋಲಿಕೆ  

ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”


ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.


ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.


ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.


ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.


ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.


“‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು