Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಹೇಸಿಗೆಯಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಬಾರದು; ಅದು ಹೇಸಿಗೆಯಾದ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:22
9 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.


ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು