Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಅವರ ನಾಡು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ. ಆ ನಾಡು ತನ್ನಲ್ಲಿ ವಾಸಿಸಿದವರನ್ನು ಕಕ್ಕಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:25
25 ತಿಳಿವುಗಳ ಹೋಲಿಕೆ  

ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.


ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ.


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”


ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”


ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.


ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು