Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿಮಗಿಂತ ಮುಂಚೆ ನಾಡಿನಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ನಾಡು ಕೆಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಹೇಸಿಗೆಯಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕೃತ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:27
14 ತಿಳಿವುಗಳ ಹೋಲಿಕೆ  

ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.


ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.


ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.


“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.


ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು