Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:5
19 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.


ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು,


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.


ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.


ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.


“‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು