Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ತಂದೆಯ ಮಗಳನ್ನಾಗಲಿ, ತಾಯಿಯ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ಒಡಹುಟ್ಟಿದವರು; ಪರಸ್ತ್ರೀಯರಲ್ಲಿ ಹುಟ್ಟಿದವರಾದರೂ ಅವರು ನಿಮಗೆ ಅಕ್ಕತಂಗಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:9
6 ತಿಳಿವುಗಳ ಹೋಲಿಕೆ  

ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.


“ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.


ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು