Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ದ್ರಾಕ್ಷಿತೋಟಗಳಲ್ಲಿರುವ ದ್ರಾಕ್ಷಿಗಳನ್ನೆಲ್ಲಾ ತೆಗೆದುಕೊಳ್ಳಬೇಡಿರಿ: ನೆಲದ ಮೇಲೆ ಬೀಳುವ ದ್ರಾಕ್ಷಿಹಣ್ಣುಗಳನ್ನು ಹೆಕ್ಕಿಕೊಳ್ಳಬಾರದು. ಯಾಕೆಂದರೆ ನೀವು ಅವುಗಳನ್ನು ಬಡವರಿಗಾಗಿಯೂ ನಿಮ್ಮ ದೇಶದಲ್ಲಿ ವಾಸಿಸಲು ಬಂದ ಪರದೇಶಸ್ಥರಿಗಾಗಿಯೂ ಬಿಡಬೇಕು. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:10
16 ತಿಳಿವುಗಳ ಹೋಲಿಕೆ  

ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.


ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.


ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,


ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?


ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.


“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.


“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.


ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.


ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.


ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.


ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು