Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:14
14 ತಿಳಿವುಗಳ ಹೋಲಿಕೆ  

“ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.


“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು